Belagavi NewsBelgaum NewsKannada NewsKarnataka NewsLatest
*ಯಲ್ಲಮ್ಮನ ದರ್ಶನ ಪಡೆದು ವಾಸಪ್ ಆಗುತ್ತಿದ್ದಾಗ ಅಪಘಾತ: ಏಳು ಜನರಿಗೆ ಗಾಯ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸವದತ್ತಿಯ ರೇಣುಕಾ ಯಲ್ಲಮ್ಮನ ದೇವಸ್ಥಾನಕ್ಕೆ ಹೋಗಿ ಬರುತ್ತಿದ್ದ ವಾಹನ ಪಲ್ಟಿಯಾಗಿರುವ ಘಟನೆ ಬೆಳಗಾವಿ ತಾಲೂಕಿನ ಹಲಗಾ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಸವದತ್ತಿ ಯಲ್ಲಮ್ಮನ ದೇವಸ್ಥಾನದಿಂದ ಬೆಳಗಾವಿ ಕಡೆ ಹೊರಟಿದ್ದ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪಲ್ಟಿಯಾದ ಹಿನ್ನಲೆ ಏಳು ಜನರಿಗೆ ಗಾಯಗಳಾಗಿದೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ಹಿರೇಬಾಗೇವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



