CrimeKannada NewsKarnataka NewsTravel

*ನಾಲೆಗೆ ಉರುಳಿ ಬಿದ್ದ ಲಾರಿ: ಓರ್ವ ಸಾವು*

ಪ್ರಗತಿವಾಹಿನಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿ ಅಕ್ಕಿ ಲೋಡ್ ಮಾಡಿಕೊಂಡು ಹೊರಟಿದ್ದ ಲಾರಿಯೊಂದು ಹೇಮಾವತಿ ನಾಲೆಗೆ ಉರುಳಿ ಬಿದ್ದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ಸಂಭವಿಸಿದೆ.

ತುಮಕೂರು ಜಿಲ್ಲೆಯ  ಕುಣಿಗಲ್ ತಾಲೂಕಿನ ಕುರುಡಿಹಳ್ಳಿ ಗ್ರಾಮದ ಬಳಿ ಈ ಭೀಕರ ಅಪಘಾತ ನಡೆದಿದೆ. ಆಂಧ್ರಪ್ರದೇಶದ ಬನಗಾನಪಲ್ಲಿಯಿಂದ ಕೇರಳಕ್ಕೆ ಅಕ್ಕಿ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯು ಕುರುಡಿಹಳ್ಳಿ ಸಮೀಪ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ಡಿವೈಡರ್‌ಗೆ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಲಾರಿಯು ಪಕ್ಕದಲ್ಲಿದ್ದ ಹೇಮಾವತಿ ನಾಲೆಗೆ ಪಲ್ಟಿಯಾಗಿದೆ.

ಈ ಅಪಘಾತದಲ್ಲಿ ಆಂಧ್ರಪ್ರದೇಶ ಮೂಲದ ಲಾರಿ ಚಾಲಕ ವೆಂಕಟೇಶ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಲಾರಿಯಲ್ಲಿದ್ದ ಮಧು ಅಲಿಯಾಸ್ ಮದನ್ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ತಿಳಿದ ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಕುಣಿಗಲ್ ಠಾಣೆಯ ಪೊಲೀಸರು, ಸ್ಥಳೀಯರ ನೆರವಿನಿಂದ ಕ್ರೇನ್ ಬಳಸಿ ನಾಲೆಗೆ ಬಿದ್ದಿದ್ದ ಲಾರಿಯನ್ನು ಮೇಲೆತ್ತಿದ್ದಾರೆ. ಈ ಕುರಿತು ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button