Kannada NewsLatestNational

*ರಾಷ್ಟ್ರೀಯ ಹೆದ್ದಾರಿಯಲ್ಲಿ ಪಾದಚಾರಿಗಳ ಮೇಲೆ ಹರಿದ ಲಾರಿ: ಐವರು ಸಾವು* 

ಪ್ರಗತಿವಾಹಿನಿ ಸುದ್ದಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಮಧ್ಯಪ್ರದೇಶದ ದಿಂಡೋರಿ ಜಿಲ್ಲೆಯಲ್ಲಿ ನಡೆದಿದೆ.‌

ವೇಗವಾಗಿ ಬಂದ ಲಾರಿಯೊಂದು ರಸ್ತೆಯಲ್ಲಿದ್ದವರ ಮೇಲೆ ಹರಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿದ್ದ ಆರು ಜನರ ಮೇಲೆ ವೇಗವಾಗಿ ಬಂದ ಟ್ರಕ್ ಅಪ್ಪಳಿಸಿದೆ. ಲಾರಿಯ ಚಕ್ರಕ್ಕೆ ಸಿಲುಕಿದ ಐವರು ಪುರುಷರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡರೆ, ಮತ್ತೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಘಟನೆ ನಡೆದ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಅಪಘಾತ ಸಂಭವಿಸಿದ ಕೂಡಲೇ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

Home add -Advt

ಮೃತರ ಗುರುತು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದ್ದು, ಮುಂಜಾನೆ ಮಂಜು ಮುಸುಕಿದ ವಾತಾವರಣ ಅಥವಾ ಚಾಲಕನ ಅಜಾಗರೂಕತೆ ಈ ಭೀಕರ ಘಟನೆಗೆ ಕಾರಣವಿರಬಹುದು ಎಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ. 

Related Articles

Back to top button