Belagavi NewsBelgaum News

*ಘಟಪ್ರಭಾ ನದಿಗೆ ಉರುಳಿ ಬಿದ್ದ ಲಾರಿ*

ಪ್ರಗತಿವಾಹಿನಿ ಸುದ್ದಿ: ಘಟಪ್ರಭಾ ನದಿಗೆ ಲಾರಿ ಉರುಳಿ ಬಿದ್ದಿರುವ ಘಟನೆ ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿದ ಲಾರಿ ಏಕಾಏಕಿ ಘಟಪ್ರಭಾ ನದಿಗೆ ಉರುಳಿ ಬಿದ್ದಿದೆ. ತಕ್ಷಣ ಲಾರಿ ಚಾಲಕ ಈಜಿ ದಡ ಸೇರಿ ಬಚಾವ್ ಆಗಿದ್ದಾನೆ.

Home add -Advt

ರಾಷ್ಟ್ರೀಯ ಹೆದ್ದಾರಿಯಲ್ಲಿ ಅವೈಜ್ಞಾನಿಕ ಕಾಮಗಾರಿ ಹಾಗೂ ರಸ್ತೆಗೆ ತಡೆಗೋಡೆ ನಿರ್ಮಾಣ ಮಾಡದಿರುವ ಹಿನ್ನೆಲೆಯಲ್ಲಿ ಲಾರಿ ಅಪಘಾತಕ್ಕೀಡಾಗಿದ್ದು, ನದಿಗೆ ಉರುಳಿ ಬಿದ್ದಿದೆ.

ಸದ್ಯ ಜೆಸಿಬಿ ಸಹಾಯದಿಂದಾಗಿ ಲಾರಿ ಮೇಲಕೆತ್ತುವ ಕಾರ್ಯಾಚರಣೆ ನಡೆಸಲಾಗಿದೆ. ಕಾಕತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Related Articles

Back to top button