ಚಿಕ್ಕಬಳ್ಳಾಪುರ: ಗ್ಯಾಸ್ ಸಿಲಿಂಡರ್ ತುಂಬಿದ್ದ ಕ್ಯಾಂಟರ್ ಹಾಗೂ ಗ್ರಾನೈಟ್ ಸಾಗಿಸುತ್ತಿದ್ದ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಎರಡು ಲಾರಿಗಳು ಹೊತ್ತಿ ಉರಿದ ಘಟನೆ ಚಿಕ್ಕಬಳ್ಳಾಪುರದ ಹುನೇಗಲ್ ಗ್ರಾಮದಲ್ಲಿ ನಡೆದಿದೆ.
ಸಿಲಿಂಡರ್ ತುಂಬಿ ಕೊಂಡು ಹೋಗುತ್ತಿದ್ದ ಕ್ಯಾಂಟರ್ ಗೆ ಲಾರಿ ಹಿಂಡಿನಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದೆ. ನಡುರಸ್ತೆಯಲ್ಲೇ ಲಾರಿಗಳು ಬೆಂಕಿಗಾಹುತಿಯಾಗಿವೆ.
ಘಟನೆಯಲ್ಲಿ ಎರಡೂ ಲಾರಿಯ ಚಾಲಕರು ಹಾಗೂ ಕ್ಲೀನರ್ ಗೆ ಗಾಯಗಳಾಗಿವೆ. ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ