Karnataka News

*ಹಬ್ಬದ ದಿನವೇ ದುರಂತ: ಮೂವರು ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಗೌರಿ ಗಣೇಶ ಹಬ್ಬದ ಸಂದರ್ಭದಲ್ಲೇ ಸಾಲು ಸಾಲು ಅಪಘಾತ ಪ್ರಕರಣಗಳು ನಡೆಯುತ್ತಿವೆ. ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಸಾವನ್ನಪ್ಪಿರುವ ಘಟನೆ ರಾಮನಗರದಲ್ಲಿ ನಡೆದಿದೆ.

ರಾಮನಗರದ ಮಾಯಗಾನಹಳ್ಳಿ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಓರ್ವ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಗುರುಮೂರ್ತಿ (39), ಶೇಖ್ ಆಸೀಫ್ (45), ವೆಂಕಟೇಶ್ (58) ಮೃತ ದುರ್ದೈವಿಗಳು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button