Kannada NewsKarnataka NewsLatest

*ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಳ್ಳಂ ಬೆಳಿಗ್ಗೆ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನ ಉತ್ತರ ತಾಲೂಕಿನಲ್ಲಿ ನಡೆದಿದೆ.

ನೈಸ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಚುಂಚಘಟ್ಟ ನಿವಾಸಿ ಮಜುನಾಥ್ (52) ಸೇರಿ ಇಬ್ಬರು ಮೃತಪಟ್ಟಿದ್ದಾರೆ.

ಹೇಮಲತಾ, ಕೃತ್ತಿಕಾ, ಪ್ರಜ್ವಲ್ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ನೆಲಮಂಗಲ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Home add -Advt


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button