ಪ್ರಗತಿವಾಹಿನಿ ಸುದ್ದಿ: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕೇಸರಹಟ್ಟಿ ಗ್ರಾಮದಲ್ಲಿ ನಡೆದಿದೆ.
ಮರಕುಂಬಿ ಗ್ರಾಮದ ಮಂಜುನಾಥ್ ನಾಯಕ್ ಹಾಗೂ ಪತ್ನಿ ನೇತ್ರಾವತಿ ಮೃತ ದುರ್ದೈವಿಗಳು. ಅಪಘಾತದಲ್ಲಿ ಓರ್ವ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳುವನ್ನು ಅಸ್ಪತ್ರೆಗೆ ದಾಖಲಿಸಲಾಗಿದೆ.
ಕೂಲಿ ಕೆಲಸಕ್ಕೆಂದು ದಂಪತಿ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ