
ಪ್ರಗತಿವಾಹಿನಿ ಸುದ್ದಿ: ಲಾರಿ ಹಾಗೂ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ಬಿಹಾರದ ಬೇಗುಸರೈನಲ್ಲಿ ನಡೆದಿದೆ.
ಇಂದು ಮುಂಜಾನೆ ಈ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಸ್ ಹಾಗೂ ಡಂಪರ್ ಲಾರಿ ನಡುವೆ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ. ಅಪಘಾತದಿಂದಾಗಿ ಕೆಲ ಕಾಲ ವಾಹನಗಳ ಸಂಚಾರಕ್ಕೆ ಅಡ್ಡಿಯುಂಟಾದ ಘಟನೆಯೂ ನಡೆದಿದೆ.