
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಂಟೈನರ್ ಲಾರಿ ಹಾಗೂ ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನಲ್ಯಾಡಿ ಬಳಿ ನಡೆದಿದೆ.
ನೆಲ್ಯಾಡಿ ಸಮೀಪದ ಮಣ್ಣಗುಂಡಿ ಬಳಿ ಈ ಅಪಘಾತ ಸಂಭವಿಸಿದು, ಲಾರಿ ಹಾಗೂ ಬಸ್ ನಡುವೆ ಡಿಕ್ಕಿ ಹೊಡೆದ ರಭಸಕ್ಕೆ ಎರಡೂ ವಾಹನಗಳು ಕ್ಷಣಾರ್ಧದಲ್ಲಿ ಹೊತ್ತಿ ಉರಿದಿದೆ. ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬಸ್ ನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.