
ಪ್ರಗತಿವಾಹಿನಿ ಸುದ್ದಿ: ಮದುವೆ ಆಮಂತ್ರಣ ಪತ್ರಿಕೆ ನೀಡಲು ತೆರಳುತ್ತಿದ್ದ ವೇಳೆ ರಸ್ತೆ ಬದಿ ನಿಂತಿದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಬಳಿ ನಡೆದಿದೆ.
ಮಹೇಶ್ (32), ಪ್ರೇಮ್ ಕುಮಾರ್ (25) ಅನ್ನದಾನಯ್ಯ (25) ಮೃತ ದುರ್ದೈವಿಗಳು. ಅಪಘಾತದಲ್ಲಿ ನಿತ್ಯಾನಂದ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು, ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಮಳಖೇಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.




