Kannada NewsKarnataka NewsLatest

*ಭೀಕರ ಅಪಘಾತ: ಮೂವರು ಯುವಕರು ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೆಂಗಳೂರು ನಗರದ ಹೊರವಲಯದ ಅಗರ ಕ್ರಾಸ್ ಬಳಿ ಈ ದುರಮ್ತ ಸಂಭವಿಸಿದೆ. ಮೃತಪಟ್ಟ ಯುವಕರನ್ನು ಸೈಫ್ ಪಾಷಾ, ಯೂಸುಫ್ ಖಾನ್ ಮತ್ತು ಅಜರ್ ಪಾಷಾ ಎಂದು ಗುರುತಿಸಲಾಗಿದೆ.

ಲಾರಿಯ ಹಿಂಭಾಗಕ್ಕೆ ಅತಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗವು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಮೃತದೇಹಗಳನ್ನು ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಕಗ್ಗಲಿಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Home add -Advt

Related Articles

Back to top button