
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಲಾರಿ-ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ 6 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದ್ದು, 6 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೂಟೆಬೆನ್ನೂರು ಗ್ರಾಮದಲ್ಲಿ ನಡೆದಿದೆ.
ಗಾಯಾಳುವನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹರಿಯಾಣ ಮೂಲದ ಆಡಿ ಕಾರು ಲಾರಿಗೆ ಹಿಂಬದಿಯಿಂದ ಗುದ್ದಿದ ಪರಿಣಾಮ ಈ ದುರಣ್ತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಬ್ಯಾಡಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.