Latest

ಸತ್ಯ ಹೇಳಲು ಧೈರ್ಯ ಇಲ್ಲದ ಕಾಂಗ್ರೆಸ್ ನಾಯಕರಿಂದ ಅಖಂಡ ಶ್ರೀನಿವಾಸ್ ಗೆ ನ್ಯಾಯಸಿಗಲು ಸಾಧ್ಯವೇ?

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕನಿಷ್ಠಪಕ್ಷ ಸತ್ಯಗಳನ್ನು ಗಟ್ಟಿಯಾಗಿ ಹೇಳುವ ಧೈರ್ಯ ಇಲ್ಲದ ಕಾಂಗ್ರೆಸ್ ನಾಯಕರಿಂದ ಅದೇ ಪಕ್ಷದ ದಲಿತ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿಯವರಿಗೆ ನ್ಯಾಯ ಸಿಗಲು ಸಾಧ್ಯವೇ? ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಪ್ರಶ್ನಿಸಿದ್ದಾರೆ.

ಬೆಂಗಳೂರು ಗಲಭೆ ಪ್ರಕರಣ ಸಂಬಂಧ ಕಾರ್ಪೊರೇಟರ್‌ಗಳ ವಿಚಾರಣೆ ವಿಚಾರವಾಗಿ ಸಚಿವ ಸುಧಾಕರ್ ಸರಣಿ ಟ್ವೀಟ್ ಮೂಲಕ ಟೀಕೆ ಮಾಡಿದ್ದಾರೆ. ಈ ಜಗತ್ತಿನಲ್ಲಿ ಚಿರಕಾಲ ಉಳಿಯುವಂಥದ್ದು ನಯ-ವಿನಯವೇ ಹೊರತು ಮೃಗೀಯತೆಯೂ ಅಲ್ಲ, ದೇಹಬಲವೂ ಅಲ್ಲ. ಸತ್ಯಕ್ಕೆ ಸಾವಿಲ್ಲ ಎಂದು ಹೇಳಿದ್ದಾರೆ.

ತನುವಿನ ಕೋಪ ತನ್ನ ಹಿರಿಯತನದ ಕೇಡು, ಮನದ ಕೋಪ ತನ್ನ ಅರಿವಿನ ಕೇಡು, ಮನೆಯೊಳಗಣ ಕಿಚ್ಚು ಮನೆಯ ಸುಟ್ಟಲ್ಲದೆ ನೆರೆಮನೆಯ ಸುಡದು ಕೂಡಲಸಂಗಮದೇವಾ? ಎಂಬ ವಚನದ ಸಾಲುಗಳನ್ನು ಬರೆದಿರುವ ಸಚಿವರು, ಬೆಂಗಳೂರು ಗಲಭೆ ಕಾರಣ ಯಾರು? ಎಂಬ ಸತ್ಯ ಹೊರ ಬರುತ್ತಿದೆ. ಕಾಂಗ್ರೆಸ್ ಕಾರ್ಪೊರೇಟರ್‌ಗಳ ಸಂಪತ್‍ರಾಜ್, ಜಾಕೀರ್ ಅವರು ಇಂದು ಸಿಸಿಬಿ ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ತಿಳಿಸಿದ್ದಾರೆ.

Home add -Advt

Related Articles

Back to top button