Kannada NewsKarnataka NewsLatest

*ಭೀಕರ ಅಪಘಾತ; ಸ್ಥಳದಲ್ಲೇ 7 ಜನರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ವಿಜಯನಗರ: ಎರಡು ಲಾರಿ ಹಾಗೂ ಕ್ರೂಸರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ 7 ಜನರು ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಹೊರವಲಯದಲ್ಲಿ ನಡೆದಿದೆ.

ಲಾರಿ ಆಕ್ಸಲ್ ಕಟ್ ಆಗಿ ಈ ಅಪಘಾತ ಸಂಭವಿಸಿದೆ.ಘಟನೆಯಲಿ 7 ಜನರು ಸಾವನ್ನಪ್ಪಿದ್ದಾರೆ. ಮೂವರ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರು ಹೊಸಪೇಟೆ ಮೂಲದವರು ಎನ್ನಲಾಗಿದೆ. ಆದರೆ ಗುರುತು ತಿಳಿದುಬಂದಿಲ್ಲ. ಸ್ಥಳಕ್ಕೆ ಮರಿಯಮ್ಮನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button