ಶಕ್ತಿ ಯೋಜನೆಯಿಂದ ನಷ್ಟ; ಬಸ್ ದರ ಹೆಚ್ಚಿಸಲು ಚಿಂತನೆ: ನಿಗಮದ ಅಧ್ಯಕ್ಷ ರಾಜು ಕಾಗೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಪಂಚ ಯೋಜನೆಗಳ ಪೈಕಿ ಒಂದು ಯೋಜನೆಯಾದ ಶಕ್ತಿ ಯೋಜನೆಯಿಂದ ಸಾರಿಗೆ ನಿಗಮ ನಷ್ಟದಲ್ಲಿ ಇದೆ ಎಂದು ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ, ಶಾಸಕ ರಾಜು ಕಾಗೆ ತಳಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಕರ್ನಾಟಕ ಸರ್ಕಾರ ಶಕ್ತಿ ಯೋಜನೆ ಜಾರಿಗೆ ತಂದು ಒಂದು ವರ್ಷ ಕಳೆಯಿತು. ಮಹಿಳೆಯರು ಉಚಿತವಾಗಿ ಸರ್ಕಾರಿ ಬಸ್‌ಗಳಲ್ಲಿ ಸಂಚರಿಸುತ್ತಿದ್ದಾರೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ ನಷ್ಟವಾಗಿದೆ.
ರಾಜ್ಯ ಸರ್ಕಾರದ ಶಕ್ತಿ ಯೋಜನೆಯಿಂದ ನಿಗಮ ನಷ್ಟದಲ್ಲಿದೆ. ಜೊತೆಗೆ ಡೀಸೆಲ್ ಹಾಗೂ ಬಸ್‌ನ ಬಿಡಿ ಭಾಗಗಳ ದರ ಕೂಡ ಹೆಚ್ಚಾಗಿದೆ. ಈ ಕಾರಣದಿಂದ ಟಿಕೆಟ್ ದರ ಹೆಚ್ಚಿಸುವ ಚಿಂತನೆಯಲ್ಲಿದ್ದೇವೆ ಎಂದು ಹೇಳಿದರು.
ಶಕ್ತಿ ಯೋಜನೆಯಿಂದ ನಿಗಮ ಸಂಪೂರ್ಣ ನಷ್ಟದಲ್ಲಿದೆ. ಹೀಗಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ಆಸ್ತಿ ಪರಭಾರೆ ಮಾಡುತ್ತೇವೆ. ಸಂಸ್ಥೆಗೆ ಸೇರಿದ ಹಳೇ ಕಟ್ಟಡಗಳನ್ನು ನವೀಕರಿಸಿ ಬಾಡಿಗೆ ಕೊಡುತ್ತೇವೆ ಎಂದು ಹೇಳಿದರು.
ಈಗಾಗಲೇ ಹಾಲು ಸೇರಿದಂತೆ ಇನ್ನಿತರ ವಸ್ತುಗಳ ಮೇಲೆ ಬೆಲೆ ಏರಿಕೆ ಮಾಡಲಾಗಿದ್ದು, ಇದೀಗ ಗಾಯದ ಮೇಲೆ ಬರೆ ಎಳೆಯೋಕೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಕಳೆದ ಹತ್ತು ವರ್ಷದಿಂದ ಟಿಕೆಟ್ ದರ ಏರಿಕೆಯಾಗಿಲ್ಲ, ಹಾಗಾಗಿ ಈ ಬಾರಿ ಬೆಲೆ ಏರಿಕೆ ಮಾಡಲು ಮುಂದಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ