ಐಎಎಸ್ ಜಗಳ: ಇಬ್ಬರಿಗೂ ವರ್ಗಾವಣೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಕಳೆದ ಕೆಲವು ದಿನಗಳಿಂದ ತೀವ್ರ ವಿವಾದಕ್ಕೆ ಕಾರಣರಾಗಿದ್ದ ಇಬ್ಬರು ಮಹಿಳಾ ಐಎಎಸ್ ಅಧಿಕಾರಿಗಳನ್ನೂ ರಾಜ್ಯ ಸರಕಾರ ಎತ್ತಂಗಡಿ ಮಾಡಿದೆ.

ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಇಬ್ಬರನ್ನು ಶನಿವಾರ ರಾತ್ರಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

Related Articles

ರೋಹಿಣಿ ಸಿಂಧೂರಿ ಅವರನ್ನು ಧರ್ಮದತ್ತಿ ಇಲಾಖೆಯ ಆಯುಕ್ತರನ್ನಾಗಿ ವರ್ಗಾಯಿಸಲಾಗಿದ್ದು ಅವರ ಜಾಗಕ್ಕೆ ಗೌತಮ್ ಬಗಾದಿ ಅವರನ್ನು ಹಾಕಲಾಗಿದೆ.

ಶಿಲ್ಪಾ ನಾಗ್ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಇಲಾಖೆಯ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ. ಅವರ ಜಾಗಕ್ಕೆ ಲಕ್ಷ್ಮಿಕಾಂತ್ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ.

Home add -Advt

ಬಿಬಿಎಂಪಿ ವಿಶೇಷ ಆಯುಕ್ತರನ್ನಾಗಿ ದಯಾನಂದ ಹಾಗೂ ಬೆಸ್ಕಾಂ ಆಡಳಿತ ನಿರ್ದೇಶಕರನ್ನಾಗಿ ಬಿಬಿಎಂಪಿ ವಿಶೇಷ ಆಯುಕ್ತ ರಾಜೇಂದ್ರ ಚೋಳನ್ ಅವರಿಗೆ ಹೆಚ್ಚುವರಿ ಹುದ್ದೆ ನೀಡಲಾಗಿದೆ.

ರೋಹಿಣಿ ಸಿಂಧೂರಿ ಹಾಗೂ ಶಿಲ್ಪಾ ನಾಗ್ ಜಗಳ ರಾಜ್ಯ ಸರಕಾರಕ್ಕೆ ಮುಜುಗರವನ್ನುಂಟು ಮಾಡಿತ್ತು.

ತಾರಕಕ್ಕೇರಿದ ಮಹಿಳಾ ಅಧಿಕಾರಿಗಳ ಮಾತಿನ ಸಮರ; ಶಿಲ್ಪಾ-ಸಿಂಧೂರಿ ಜಟಾಪಟಿ

ತಾಕತ್ತಿದ್ದರೆ ಬಹಿರಂಗ ಸಂಘರ್ಷಕ್ಕೆ ಕಡಿವಾಣ ಹಾಕಿ -ಎಚ್.ಡಿ.ಕುಮಾರಸ್ವಾಮಿ ಸವಾಲು

Related Articles

Back to top button