ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕನ್ನಡದ ಲವ್ ಯೂ ರಚ್ಚು ಸಿನಿಮಾ ಚಿತ್ರೀಕರಣದ ವೇಳೆ ಸಂಭವಿಸಿದ ದುರಂತ ಪ್ರಕರಣದ ಬೆನ್ನಲ್ಲೇ ನಿರ್ಮಾಪಕ ಗುರುದೇಶಪಾಂಡೆ ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಘಟನೆ ಬೆನ್ನಲ್ಲೇ ಪೊಲೀಸ್ ಠಾಣೆಗೆ ತೆರಳುತ್ತಿರುವುದಾಗಿ ಹೇಳಿಕೆ ನೀಡಿದ್ದ ನಿರ್ಮಾಪಕ ಗುರುದೇಶಪಾಂಡೆ ಮೊಬೈಲ್ ಸ್ವಿಚ್ಡ್ ಆಫ್ ಮಾಡಿ ನಾಪತ್ತೆಯಾಗಿದ್ದು, ಬಿಡದಿ ಪೊಲೀಸರು ನಿರ್ಮಾಪಕರಿಗಾಗಿ ಹುಡುಕಾಟ ನಡೆಸಿದ್ದಾರೆ.
ಬಿಡದಿ ಜೋಗಿನಪಾಳ್ಯ ಬಳಿ ಲವ್ ಯೂ ರಚ್ಚು ಸಿನಿಮಾ ಚಿತ್ರೀಕರಣದ ವೇಳೆ ವಿದ್ಯುತ್ ತಂತಿ ತಗುಲಿ ಫೈಟರ್ ವಿವೇಕ್ ಸಾವನ್ನಪ್ಪಿದ್ದರು. ಈ ಪ್ರಕರಣ ಸಂಬಂಧ ಬಿಡದಿ ಪೊಲೀಸರು ನಿರ್ದೇಶಕ ಶಂಕರ್ ರಾಜ್, ನಿರ್ಮಾಪಕ ಗುರುದೇಶಪಾಂಡೆ, ಸಾಹಸ ನಿರ್ದೇಶಕ ವಿನೋದ್, ಸಿನಿಮಾ ಇನ್ ಚಾರ್ಜ್ ಫರ್ನಾಂಡೀಸ್, ಕ್ರೇನ್ ಆಪರೇಟರ್ ಮಹದೇವ್ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ.
ಇತಿಮಿತಿಯಲ್ಲಿ ಮಾತನಾಡಬೇಕು: ಪ್ರೀತಂ ಗೌಡ ವಿರುದ್ಧ ಕಿಡಿ ಕಾರಿದ ಸಚಿವ ವಿ.ಸೋಮಣ್ಣ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ