
ಪ್ರಗತಿವಾಹಿನಿ ಸುದ್ದಿ: ಪ್ರೇಮಿಗಳಿಬ್ಬರ ನಡುವೆ ಆರಂಭವಾದ ಮಸ್ತಾಪ, ಜಗಳ ಆತ್ಮಹತ್ಯೆಯಲ್ಲಿ ಅಂತ್ಯವಾದ ಘಟನೆ ನಡೆದಿದೆ. ಪ್ರಿಯಕರನೊಬ್ಬ ಯುವತಿಗೆ ಚಾಕು ಇರಿದು ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾನೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೊಡ್ಮಾಣ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ದಿವ್ಯಾ ಯಾನೆ ಎಂಬ ಯುವತಿಗೆ ಚಾಕು ಇದು ಶ್ರೀಧರ್ (30) ಎಂಬಾತ ಆತ್ಮಹತ್ಯೆಗೆ ಶರಣಾಗಿದ್ದಾನೆ.
ದಿವ್ಯಾ ಹಾಗೂ ಶ್ರೀಧರ್ 8 ವರ್ಷಗಳಿಂದ ಪಸ್ಪರ ಪ್ರೀತಿಸುತ್ತಿದ್ದರು. ಕೆಲ ತಿಂಗಳ ಹಿಂದೆ ಇಬ್ಬರ ನಡುವೆ ಮನಸ್ತಾಪವಾಗಿತ್ತು. ಇಂದು ಏಕಾಏಕಿ ದಿವ್ಯಾ ಮನೆಗೆ ಬಂದಿದ್ದ ಶ್ರೀಧರ್ ಮದುವೆಯಾಗುವಂತೆ ಒತ್ತಾಯಿಸಿದ್ದ. ಈ ವೇಳೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದೆ. ಕೋಪಗೊಂದ ಶ್ರೀಧರ್ ಚಾಕುವಿನಿಂದ ದಿವ್ಯಾಳಿಗೆ ಇರಿದಿದ್ದಾನೆ. ಆತನಿಂದ ತಪ್ಪಿಸಿಕೊಳ್ಳಲು ಹೋಗಿ ಪ್ರಜ್ಞೆತಪ್ಪಿ ಬಿದ್ದಿದ್ದಾಳೆ.
ಇದನ್ನು ಕಂಡು ದಿವ್ಯಾ ಸಾವನ್ನಪ್ಪಿದ್ದಾಳೆ ಎಂಬ ಭಯಕ್ಕೆ ಆಕೆಯ ಮನೆಯಲ್ಲಿಯೇ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬಂಟ್ವಾಳ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.