
ಪ್ರಗತಿವಾಹಿನಿ ಸುದ್ದಿ; ಹಾವೆರಿ: ಸ್ಲೀಪರ್ ಕೋಚ್ ಬಸ್ ನಲ್ಲಿಯೇ ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಯುವತಿ ಬಸ್ ನಲ್ಲಿಯೇ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ಚಳಗೇರಿ ಗ್ರೀನ್ ಪ್ಯಾಲೇಸ್ ಹೋಟೆಲ್ ಬಳಿ ನಡೆದಿದೆ.
20 ವರ್ಷದ ಹೇಮಾ ರಾಮಕೃಷ್ಣ ಮೃತ ಯುವತಿ. ಹೇಮಾ ಜೊತೆ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಅಖಿಲ್ ನನ್ನು ಬಸ್ ನಲ್ಲಿದ್ದ ಪ್ರಯಾಣಿಕರೇ ಆಸ್ಪತ್ರೆಗೆ ಸಾಗಿಸಿ ರಕ್ಷಿಸಿದ್ದಾರೆ. 5 ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಬೆಂಗಳೂರು ಮೂಲದ ಹೇಮಾ ಹಾಗೂ ಬಾಗಲಕೋಟೆ ಮೂಲದ ಅಖಿಲ್ ಪ್ರೀತಿಸುತ್ತಿದ್ದರು. ಆದರೆ ಅವರ ಪ್ರೀತಿಗೆ ಪೋಷಕರ ವಿರೋಧವಿತ್ತು. ಇದರಿಂದ ನೊಂದು ಇಬ್ಬರೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಮೃತ ಹೇಮಾ ಅಂತಿಮ ವರ್ಷದ ಬಿಎ ಓದುತ್ತಿದ್ದಳು ಎಂದು ತಿಳಿದುಬಂದಿದೆ.
https://pragati.taskdun.com/moral-policinganti-communal-wingdr-g-parameshwarmangalore/