
ಪ್ರಗತಿವಾಹಿನಿ ಸುದ್ದಿ; ರಾಮನಗರ: ಪ್ರೇಮಿಗಳಿಬ್ಬರೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಯುವಕ ಸಾವನ್ನಪ್ಪಿದರೆ ಯುವತಿ ಸ್ಥಿತಿ ಗಂಭೀರವಾಗಿರುವ ಘಟನೆ ಹೊಗೇನಕಲ್ ಬಳಿ ನಡೆದಿದೆ.
ಹೊಗೇನಕಲ್ ಜಲಪಾತದ ಬಳಿ ವಿಷಸೇವಿಸಿದ್ದ ಪ್ರೇಮಿಗಳಿಬ್ಬರು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಂಡೆಯ ಮೇಲೆ ಬಿದ್ದಿದ್ದರು. ಇದನ್ನು ಗಮನಿಸಿದ ಸ್ಥಳೀಯರು ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಯುವಕ ಸಾಅವನ್ನಪ್ಪಿದ್ದು, ಯುವತಿ ಸ್ಥಿತಿ ಗಂಭೀರವಾಗಿದೆ.
ಉಮೇಶ್ (24) ಮೃತ ಯುವಕ. ರಕ್ಷಿತಾ (16) ಸ್ಥಿತಿ ಚಿಂತಾಜನಕವಾಗಿದೆ. ಪ್ರಜ್ಞಾಹೀನ ಸ್ಥಿತಿಯಲ್ಲಿರುವ ರಕ್ಷಿತಾಳನ್ನು ಚಿಕಿತ್ಸೆಗಾಗಿ ಧರ್ಮಪುರಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ