
ಪ್ರಗತಿವಾಹಿನಿ ಸುದ್ದಿ; ಕೊಪ್ಪಳ: ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವ ಪ್ರೇಮಿಗಳಿಬ್ಬರೂ ಆತ್ಮಹತ್ಯೆಗೆ ಶರಣಾದ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಅಡವಿಬಾವಿ ಗ್ರಾಮದಲ್ಲಿ ನಡೆದಿದೆ.
21 ವರ್ಷದ ಅಮರೇಶ ಮಾಲಿಪಾಟೀಲ್ ಹಾಗೂ 18 ವರ್ಷದ ಯಲ್ಲಮ್ಮ ಗೋನಾಳ ಆತ್ಮಹತ್ಯೆಗೆ ಶರಣಾದ ಯುವಕ-ಯುವತಿ.
ಇತ್ತೀಚೆಗಷ್ಟೇ ಅಮರೇಶ ಹಾಗೂ ಯಲ್ಲಮ್ಮ ಇಬ್ಬರೂ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದೀಗ ಇದ್ದಕ್ಕಿದ್ದಂತೆ ಇಬ್ಬರೂ ಯುವತಿಯ ಮನೆಯಲ್ಲಿಯೇ ನೇಣಿಗೆ ಕೊರಳೊಡ್ಡಿದ್ದಾರೆ.
ತಾವರಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ನಾಪತ್ತೆಯಾಗಿದ್ದ ಖ್ಯಾತ ಗಾಯಕಿ ಶವವಾಗಿ ಪತ್ತೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ