
ಪ್ರಗತಿವಾಹಿನಿ ಸುದ್ದಿ; ಹಾವೇರಿ: ಕಳೆದ ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ಪ್ರೇಮಿಗಳ ಶವ ಅನುಮಾನಾಸ್ಪದ ರೀತಿಯಲ್ಲಿ ಹಾವೇರಿ ಜಿಲ್ಲೆಯ ಬಸಾಪುರ ಗ್ರಾಮದ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ.
ಮೃತರನ್ನು ಪ್ರವೀಣ್ ಬಾಗಿಲದ (24) ಮತ್ತು ನೇತ್ರಾ ಬಾಳಿಕಾಯಿ (18) ಎಂದು ಗುರುತಿಸಲಾಗಿದೆ. ನೇತ್ರಾ ಎಸ್ ಎಸ್ ಎಲ್ ಸಿ ಮುಗಿಸಿದ್ದಳು, ಹಳೇರಿತ್ತಿ ಗ್ರಾಮದ ಯುವಕ ಪ್ರವೀಣನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಇಬ್ಬರೂ ಕಲೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದರು.
ಇದೀಗ ಅರಣ್ಯ ಪ್ರದೇಶದಲ್ಲಿ ಪ್ರೇಮಿಗಳ ಶವ ಪತ್ತೆಯಾಗಿದ್ದು, ಮೃತ ದೇಹದ ಬಳಿ ವಿಷದ ಬಾಟಲಿ, ಚಾಕು ಹಾಗೂ ಬೈಕ್ ಕೂಡ ಪತ್ತೆಯಾಗಿದೆ. ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.