
ಪ್ರಗತಿವಾಹಿನಿ ಸುದ್ದಿ : ಬಂಗಾಳಕೊಲ್ಲಿಯ ಆಂದ್ರ ಕರಾವಳಿಯಲ್ಲಿ ಸೆಪ್ಟೆಂಬರ್ 12ರಂದು ಉಂಟಾಗಲಿರುವ ವಾಯುಭಾರ ಕುಸಿತದ ಪರಿಣಾಮದಿಂದ ರಾಜ್ಯದಲ್ಲಿ ಇಂದು ವರುಣ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಉತ್ತರ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 15ರ ತನಕ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 14ರ ತನಕ ಮಳೆಯ ಮುನ್ಸೂಚನೆ ಇದೆ.
ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ವಿಜಯಪುರ, ಮೈಸೂರು, ಮಂಡ್ಯ, ಬೆಂಗಳೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಇಂದಿನಿಂದ ದಕ್ಷಿಣ ಒಳನಾಡು ಬಹುತೇಕ ಭಾಗಗಳಲ್ಲಿ ಹಾಗೂ ಉತ್ತರ ಒಳನಾಡಿನ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.