Karnataka NewsLatest

*BREAKING: ಶಿರಸಿಯಲ್ಲಿ LPG ಸಿಲಿಂಡರ್ ಸ್ಫೋಟ: ಯುವತಿ ಸಾವು*

ಪ್ರಗತಿವಾಹಿನಿ ಸುದ್ದಿ: ಎಲ್ ಪಿಜಿ ಸಿಲಿಂಡರ್ ಸ್ಫೋಟಗೊಂಡು ಯುವತಿ ಸಾವನ್ನಪ್ಪಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಮರ್ಕಿಕೊಡ್ಲು ಗ್ರಾಮದಲ್ಲಿ ನಡೆದಿದೆ.

ರಂಜಿತಾ ನಾಗಪ್ಪ ದೇವಾಡಿಗ (21) ಮೃತ ಯುವತಿ. ಅನಾರೋಗ್ಯದ ಕಾರಣದಿಂದಾಗಿ ರಂಜಿತಾ ಮನೆಯಲ್ಲಿದ್ದರು. ತಂದೆ-ತಾಯಿ ಕೆಲಸಕ್ಕೆಂದು ಹೊರ ಹೋಗಿದ್ದರು. ಈ ವೇಳೆ ಮನೆಯಲ್ಲಿದ್ದ ಸಿಲಿಂಡರ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದ್ದು, ಯುವತಿ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಶಿರಸಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button