Latest

*ಸಿಲಿಂಡರ್ ಸ್ಫೋಟ; ನವಜಾತ ಶಿಶು ಸೇರಿ ಇಬ್ಬರು ಮಕ್ಕಳ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ನೊಯ್ಡಾ: ಎಲ್ ಪಿಜಿ ಸಿಲಿಂಡರ್ ಸ್ಫೋಟಗೊಂಡು ನವಜಾತ ಶಿಶು ಸೇರಿದಂತೆ ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ನೊಯ್ಡಾದ ಸೆಕ್ಟರ್ 8ರಲ್ಲಿ ನಡೆದಿದೆ.

ನೊಯ್ಡಾದ ಮೊದಹಂತದ ಗುಡಿಸಲಿಗೆ ಬೆಂಕಿ ತಗುಲಿತ್ತು. ಈ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗುತ್ತಿದ್ದಂತೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಅಷ್ಟರಲ್ಲಾಗಲೇ ಸಿಲಿಂಡರ್ ಸ್ಫೋಟಗೊಂಡು ಮನೆಯಲ್ಲಿದ್ದ ನವಜಾತ ಶಿಶು ಹಾಗೂ ಇನ್ನೋರ್ವ ಮಗು ಸಾವನ್ನಪ್ಪಿದೆ. ಘಟನೆಯಲ್ಲಿ 6 ಜನ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ದೆಹಲಿಯ ಸಪ್ತರ್ ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ಮಕ್ಕಳನ್ನು 12 ದಿನದ ನವಜಾತ ಶಿಶು ಹಾಗೂ 12 ತಿಂಗಳ ಮಗು ಎಂದು ಗುರುತಿಸಲಾಗಿದೆ. ಗ್ಯಾಸ್ ಸಿಲಿಂಡರ್ ಸೋರಿಕೆಯಿಂದಾಗಿ ಗುಡಿಸಲಿಗೆ ಬೆಂಕಿ ಬಿದ್ದು ದುರಂತ ಸಂಭವಿಸಿದೆ.

*13 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ*

https://pragati.taskdun.com/13-new-governorappointpresident/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button