ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮದ ಬೆನ್ನಲ್ಲೇ ದೇಶದ ಜನರಿಗೆ ಕೇಂದ್ರ ಸರ್ಕಾರ ಶಾಕ್ ನೀಡಿದ್ದು, ಎಲ್ ಪಿಜಿ ಸಿಲಿಂಡರ್ ದರದಲ್ಲಿ ಭಾರಿ ಏರಿಕೆ ಮಾಡಿದೆ.
19 ಕೆಜಿಯ ಕಮರ್ಷಿಯಲ್ ಎಲ್ ಪಿಜಿ ಸಿಲಿಂಡರ್ ಗಳ ಬೆಲೆ ಬರೋಬ್ಬರಿ 265 ರೂಪಾಯಿ ಹೆಚ್ಚಳವಾಗಿದೆ. ಆದರೆ 14 ಕೆಜಿ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಇಲ್ಲ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಣಿಜ್ಯ ಬಳಕೆ 19 ಕೆಜಿ ಸಿಲಿಂಡರ್ ಬೆಲೆ 265 ರೂ.ಏರಿಕೆಯಾಗಿದೆ ಈ ಮೂಲಕ ಸಿಲಿಂಡರ್ ದರ 2000 ರೂಪಾಯಿ ತಲುಪಿದೆ. ಮುಂಬೈನಲ್ಲಿ 1683ರೂ ಇದ್ದ ಸಿಲಿಂಡರ್ ದರ 1950 ರೂ ಆಗಿದೆ. ಕೋಲ್ಕತ್ತಾದಲ್ಲಿ 2073 ರೂ.ಗೆ ಏರಿಕೆಯಾಗಿದ್ದು, ಚೆನ್ನೈನಲ್ಲಿ 2133 ರೂಪಾಯಿ ಆಗಿದೆ.
ಮನೆಬಳಕೆ ಸಿಲಿಂಡರ್ 14.2ಕೆಜಿ ತೂಕದ ಅಡುಗೆ ಅನಿಲದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂಬುದು ಸಮಾಧಾನಕರ ಸಂಗತಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ