
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕಮರ್ಷಿಯಲ್ ಸಿಲಿಂಡರ್ ದರ ಕಡಿಮೆ ಮಾಡುವ ಮೂಲಕ ತೈಲ ಮಾರುಕಟ್ಟೆ ಕಂಪನಿ ಗ್ರಾಹಕರಿಗೆ ಗುಡ್ ನ್ಯೂಸ್ ನೀಡಿದೆ.
ವಾಣಿಜ್ಯ ಬಳಕೆಯ ಎಲ್ ಪಿ ಜಿ ಸಿಲಿಂಡರ್ ದರ ಕಡಿಮೆಯಾಗಿದ್ದು, ಹೊಸ ದರ ಇಂದಿನಿಂದಲೇ ದೇಶಾದ್ಯಂತ ಜಾರಿಗೆ ಬರಲಿದೆ. ವಾಣಿಜ್ಯ ಬಳಕೆಯ ಸಿಲಿಂಡರ್ ದರ 171.50 ರೂ ನಷ್ಟು ಕಡಿತಗೊಳಿಸಲಾಗಿದೆ.
ಇದು 19 ಕೆಜಿಯ ವಾಣಿಜ್ಯ ಬಳಕೆ ಸಿಲಿಂಡರ್ ಗೆ ಮಾತ್ರ ಅನ್ವಯವಾಗಲಿದೆ. 14.2 ಕೆಜಿಯ ಗೃಹ ಬಳಕೆಯ ಅಡುಗೆ ಅನಿಲದಲ್ಲಿ ಪ್ರಸ್ತುತ ಯಾವುದೇ ಬದಲಾವಣೆಯಾಗಿಲ್ಲ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ