
ಪ್ರಗತಿವಾಹಿನಿ ಸುದ್ದಿ: ಕೇಂದ್ರ ಬಜೆಟ್ ಮಂಡನೆಗೆ ಕ್ಷಣ ಗಣನೆ ಆರಂಭವಾಗಿರುವಾಗಲೇ ಎಲ್ ಪಿಜಿ ಸಿಲಿಂದರ್ ದರದಲ್ಲಿ ಏರಿಕೆಯಾಗಿದೆ. ವಾಣಿಜ್ಯ ಬಳಕೆಯ ಸಿಲಿಂಡರ್ ದರ ಏರಿಸಲಾಗಿದೆ.
ವಾಣಿಜ್ಯ ಬಳಕೆಯ 19 ಕೆಜಿಯ ಸಿಲಿಂಡರ್ ದರ 14 ರೂಪಾಯಿ ಏರಿಕೆ ಮಾಡಲಾಗಿದೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ ಬರಲಿದೆ.
ಗೃಹ ಬಳಕೆಯ ಎಲ್ ಪಿಜಿ ಗ್ಯಾಸ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಕಳೆದ ತಿಂಗಳು ಕೂಡ ತೈಲ ಕಂಪನಿಗಳು ವಾಣಿಜ್ಯ ಬಳಕೆ ಸಿಲಿಂಡರ್ ದರವನ್ನು ಕೊಂಚ ಏರಿಸಿದ್ದರು. ಇದೀಗ ಮತ್ತೆ ದರ ಏರಿಕೆ ಮಾಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ