ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿರುವ ನಡುವೆ ಗ್ರಾಹಕರಿಗೆ ಕೊಂಚ ಸಾಮಾಧಾನಕರ ಸುದ್ದಿ. ಎಲ್ ಪಿಜಿ ಅಡುಗೆ ಸಿಲಿಂಡರ್ ದರ ಇಳಿಕೆಗೆ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
14 ಕೆಜಿ ಸಿಲಿಂಡರ್ ಬೆಲೆಯನ್ನು 200 ರೂಪಾಯಿ ಇಳಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಪಿಎಂ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಸಬ್ಸಿಡಿ ರೂಪದಲ್ಲಿ ಬೆಲೆ ಇಳಿಕೆ ಸೌಲಭ್ಯ ಸಿಗಲಿದೆ.
ಸಿಲಿಂಡರ್ ದರ ಇಳಿಕೆ ಬಗ್ಗೆ ತೈಲ ಕಂಪನಿಗಳು ಶೀಘ್ರದಲ್ಲಿ ಅಧಿಕೃತವಾಗಿ ಘೋಷಣೆ ಮಾಡಲಿವೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ