
ಪ್ರಗತಿವಾಹಿನಿ ಸುದ್ದಿ: ಎಲ್ ಪಿಜಿ ಸಿಲಿಂಡರ್ ಗ್ರಾಹಕರಿಗೆ ತೈಲ ಕಂಪನಿಗಳು ಮತ್ತೆ ಶಾಕ್ ನೀಡಿವೆ. ವಾಣಿಜ್ಯ ಬಳಕೆಯ ಸಿಲಿಮ್ದರ್ ದರದಲ್ಲಿ ಮತ್ತೆ ಏರಿಕೆಯಾಗಿದೆ.
ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ದರ 25 ರೂಪಾಯಿ ಹೆಚ್ಚಲ ಮಾಡಲಾಗಿದೆ. ಇಂದಿನಿಂದಲೇ ಪರಿಷ್ಕೃತ ದರ ಜಾರಿಯಾಗಲಿದೆ. ಅಡುಗೆ ಅನಿಲ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಕಮರ್ಷಿಯಲ್ ಸಿಲಿಂಡರ್ ದರದಲ್ಲಿ ಮಾತ್ರ ಏರಿಕೆಯಾಗಿದೆ.
ಬೆಲೆ ಏರಿಕೆಯಿಂದಾಗಿ ದೆಹಲಿಯಲ್ಲಿ ಕಮರ್ಷಿಯಲ್ ಸಿಲಿಂಡರ್ ದರ 1795 ರೂಪಾಯಿ ಆಗಿದೆ. ಬೆಂಗಳೂರಿನಲ್ಲಿ 1875 ರೂಪಾಯಿ ಆಗಿದೆ. ಎರಡು ತಿಂಗಳ ಹಿಂದಷ್ಟೇ ಏರಿಕೆಯಾಗಿದ್ದ ಸಿಲಿಂಡರ್ ದರ ಇದೀಗ ಮತ್ತೆ ಏರಿಕೆಯಾಗಿದೆ. ಇದರಿಂದಾಗಿ ಹೋಟೆಲ್ ಗಳಲ್ಲಿನ ಊಟ, ತಿಂಡಿ ದರದಲ್ಲಿಯೂ ಏರಿಕೆಯಾಗುವ ಸಾಧ್ಯತೆ ಇದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ