Latest

ಮಾಸ್ಕ್ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ; ಓರ್ವ ಸಾವು

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಮಾಸ್ಕ್ ತಯಾರಿಕಾ ಘಟಕದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಓರ್ವ ಸಾವನ್ನಪ್ಪಿರುವ ಘಟನೆ ದೆಹಲಿಯ ಮಯಾಪುರಿ ಪ್ರದೇಶದಲ್ಲಿ ನಡೆದಿದೆ.

ಮೃತ ವ್ಯಕ್ತಿ ಜುಗಲ್ ಕಿಶೋರ್ ಎಂದು ಗುರುತಿಸಲಾಗಿದೆ. ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂದು ಮುಂಜಾನೆ 3:50ರ ಸುಮಾರಿನಲ್ಲಿ ಈ ಅವಘಡ ಸಂಭವಿಸಿದೆ.

ಮಾಸ್ಕ್ ತಯಾರಿಕಾ ಕಾರ್ಖಾನೆಯ ಮೂರನೇ ಮಹಡಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಮ್ದಿದ್ದು, ಕ್ಷಣಾರ್ಧದಲ್ಲಿ ಕಟ್ಟಡಕ್ಕೆ ವ್ಯಾಪಿಸಿದೆ. ಅಪಾರಪ್ರಮಾಣದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಗಂಭೀರವಾಗಿ ಗಾಯಗೊಂಡಿರುವ ಇಬ್ಬರು ಗಾಯಾಳುಗಳನ್ನು ದೀನ್ ದಯಾಳ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Home add -Advt

Related Articles

Back to top button