Latest

*ವರಿಷ್ಠರು ಹೇಳಿದ್ದನ್ನೇ ನಾನು ಹೇಳಿದ್ದೇನೆ ಎಂದ ಸಚಿವ ಎಂ.ಬಿ.ಪಾಟೀಲ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 5 ವರ್ಷ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರ್ತಾರೆ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ವರಿಷ್ಠರು ಹೇಳಿದ್ದನ್ನೇ ನಾನು ಹೇಳಿದ್ದೇನೆ ಎಂದು ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾದಿದ ಎಂ.ಬಿ.ಪಾಟೀಲ್, ವೇಣುಗೋಪಾಲ್ ಏನು ಹೇಳಿದ್ದಾರೋ ಅದನ್ನೇ ನಾನೂ ಹೇಳಿದ್ದೇನೆ. ಅಧಿಕಾರ ಹಂಚಿಕೆ ಸೂತ್ರದ ಬಗ್ಗೆ ನನಗೆ ಗೊತ್ತಿಲ್ಲ. ಪವರ್ ಶೇರಿಂಗ್ ಇದ್ದರೆ ಜನರ ಜೊತೆ ಮಾತ್ರ ಅಂತ ಹೇಳಿದ್ದಾರೆ. ನಾನು ವೈಯಕ್ತಿಕವಾಗಿ ಮಾತನಾಡಿಲ್ಲ, ವರಿಷ್ಠರು ಹೇಳಿದ್ದನ್ನೇ ನಾನು ಹೇಳಿದ್ದೇನೆ ಎಂದರು.

ಇದೇ ವೇಳೆ ಖಾತೆ ಹಂಚಿಕೆ ವಿಚಾರವಾಗಿ, ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟದ್ದು. ನಮ್ಮ ಪ್ರಯಾರಿಟಿ ಬಗ್ಗೆ ಹೇಳಿದ್ದೇವೆ. ಅಂತಿಮವಾಗಿ ಅವರು ಏನು ನಿರ್ಧಾರ ಕೈಗೊಳ್ಳುತ್ತಾರೆ ನೋಡಬೇಕು ಎಂದು ಹೇಳಿದರು.

https://pragati.taskdun.com/lokayuktaraidkalaburgi-pcarrest/


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button