
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – 2021-2022 ನೇ ಸಾಲಿನ ಸಮಗ್ರ ಕೃಷಿ ಅಭಿಯಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಹಿಂಡಲಗಾ ಗ್ರಾಮದ ಶ್ರೀ ಲಕ್ಷ್ಮೀ ದೇವಸ್ಥಾನದ ಆವರಣದಲ್ಲಿ ಚಾಲನೆ ನೀಡಿದರು.

ಈ ಸಮಗ್ರ ಕೃಷಿ ಅಭಿಯಾನ ಮೊಬೈಲ್ ಆ್ಯಪ್ ನಲ್ಲಿಯೂ ಸಹ ಲಭ್ಯವಿದ್ದು, ಆ್ಯಪ್ ನಲ್ಲಿ ರೈತರಿಗೆ ಅನುಕೂಲವಾಗುವಂತಹ ಕೃಷಿಗೆ ಸಂಬಂಧಿಸಿದ ಎಲ್ಲ ಮಾಹಿತಿಗಳು ತ್ವರಿತಗತಿಯಲ್ಲಿ ಸಿಗಲಿವೆ ಎಂದು ತಿಳಿಸಿದರು.
