*ನನ್ನನ್ನು ಬಿಜೆಪಿಯಿಂದ ಹೊರ ಕಳುಹಿಸಿದ ಸಿ.ಟಿ.ರವಿಯನ್ನು ಕ್ಷೇತ್ರದಿಂದಲೇ ಜನ ಹೊರ ಹಾಕಿದ್ದಾರೆ; ಎಂ.ಪಿ.ಕುಮಾರಸ್ವಾಮಿ ವ್ಯಂಗ್ಯ*
ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಚಿಕ್ಕಮಗಳೂರಿನಲ್ಲಿ ಚುನಾವಣೆಯಲ್ಲಿ ಸೋಲನುಭವಿಸಿರುವ ಹಿನ್ನೆಲೆಯಲ್ಲಿ ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.
ಚಿಕ್ಕಮಗಳೂರಿನ ಮೂಡಿಗೆರೆ ಕ್ಷೇತ್ರದಲ್ಲಿ ಬಿಜೆಪಿಗೆ ಜೀವ ತುಂಬಿದ್ದು ನಾನು. ಸಿ.ಟಿ.ರವಿ ನನ್ನನ್ನು ಬಿಜೆಪಿಯಿಂದ ಹೊರ ಕಳುಹಿಸಿದರು. ಆದರೆ ಇಂದು ಸಿ.ಟಿ.ರವಿಯವನ್ನು ಕ್ಷೇತ್ರದಿಂದಲೇ ಜನ ಹೊರಕಳುಹಿಸಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.
ಚಿಕ್ಕಮಗಳೂರು ಇನ್ಮುಂದೆ ವೀರಶೈವ ಲಿಂಗಾಯಿತ ಕ್ಷೇತ್ರ. ಸಿ.ಟಿ.ರವಿ ಅಹಿತಕರ ಘಟನೆಗಳು, ದತ್ತಮಾಲೆ ಮುಂದಿಟ್ಟು ಪ್ರಚಾರ ನಡೆಸಿದ್ರು. ಇನ್ಮುಂದೆ ಸಿ.ಟಿ.ರವಿಯವರ ಈ ವಿಚಾರಗಳು ಕೆಲಸ ಮಾಡಲ್ಲ ಎಂದು ಟಾಂಗ್ ನೀಡಿದ್ದಾರೆ.
ಜೆಡಿಎಸ್ ನಲ್ಲಿ ಬೂತ್ ಕಮಿಟಿ, ಪಕ್ಷ ಸಂಘಟನೆ ಇರಲಿಲ್ಲ. ಹಾಗಾಗಿ ನನಗೆ ಸೋಲಾಗಿದೆ. ಎಲ್ಲವನ್ನೂ ಸರಿ ಮಾಡಿಕೊಂಡು ಜೆಡಿಎಸ್ ಪಕ್ಷ ಸಂಘಟನೆ ಮಾಡುತ್ತೇನೆ ಎಂದು ಹೇಳಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ