Latest

ಸುಮ್ಮನೆ ಕೂರುವ ಮಾತೇ ಇಲ್ಲ; ಯೋಗೇಶ್ವರ್ ರನ್ನು ಕೈಬಿಡಬೇಕು ಎಂದ ರೇಣುಕಾಚಾರ್ಯ

ಮೆಗಾ ಸಿಟಿ ಹಗರಣದಲ್ಲಿ ಯೋಗೇಶ್ವರ್ ಬಂಧನವಾಗಲಿ; ಎಂ.ಪಿ ರೇಣುಕಾಚಾರ್ಯ

 

ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ಸಚಿವ ಸಿ.ಪಿ.ಯೋಗೇಶ್ವರ್ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು. ಅವರ ವಿರುದ್ಧ ಈಗಾಗಲೇ 65 ಶಾಸಕರ ಸಹಿ ಸಂಗ್ರಹ ಮಾಡಿದ ಪತ್ರ ರವಾನಿಸಿದ್ದೇವೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ.ರೇಣುಕಾಚಾರ್ಯ ಒತ್ತಾಯಿಸಿದ್ದಾರೆ.

Home add -Advt

ದಾವಣಗೆರೆಯಲ್ಲಿ ಮಾತನಾಡಿದ ರೇಣುಕಾಚಾರ್ಯ, ಮೆಗಾ ಸಿಟಿ ಹಗರಣಕ್ಕೆ ಸಂಬಂಧಿಸಿದಂತೆ ಯೋಗೇಶ್ವರ್ ಅವರನ್ನು ಬಂಧಿಸಿಬೇಕು. ಈ ಬಗ್ಗೆ ಅವರು ಸುಳ್ಳು ಹೇಳುತ್ತಿದ್ದಾರೆ. ಯೋಗೇಶ್ವರ್ ಅವರಿಗೆ ಜಲ ಸಂಪನ್ಮೂಲ ಮತ್ತು ಇಂಧನ ಖಾತೆಯೂ ಬೇಕಿತ್ತು, ರಾಮನಗರ ಜಿಲ್ಲಾ ಉಸ್ತುವಾರಿಯೂ ಬೇಕಿತ್ತು. ಆದರೆ ಅವರಿಗೆ ಸಿಕ್ಕಿಲ್ಲ. ಹಾಗಾಗಿ ಅವರಿಗೆ ತಳಮಳ ಶುರುವಾಗಿದೆ ಎಂದು ವಾಗ್ದಾಳಿ ನಡೆಸಿದರು.

ಸಿಎಂ ಬದಲಾವಣೆ ವಿಚಾರವಾಗಿ ಯೋಗೇಶ್ವರ್ ಸುಳ್ಳು ಹೇಳುತ್ತಿದ್ದಾರೆ. ದೆಹಲಿಯಲ್ಲಿ ನಾಯಕರ ಮನೆ ಮುಂದೆ ನಿಂತು ಫೋಟೋಗೆ ಪೋಸು ನೀಡುತ್ತಿದ್ದಾರೆ. ಕೊರೊನಾ ಸಂಕಷ್ಟ ಮುಗಿಯಲಿ. ನಾವು ಶಾಸಕರು ಏನೆಂಬುದನ್ನು ತೋರಿಸುತ್ತೇವೆ. ಈ ವಿಚಾರದಲ್ಲಿ ಸುಮ್ಮನೆ ಕೂರುವ ಮಾತೆ ಇಲ್ಲ. ಯೋಗೇಶ್ವರ್ ಅವರನ್ನು ಸಂಪುಟದಿಂದ ವಜಾ ಮಾಡಲೇಬೇಕು ಎಂದು ಆಗ್ರಹಿಸಿದರು.

ಬಿ.ವೈ.ವಿಜಯೇಂದ್ರ ದಿಢೀರ್ ದೆಹಲಿಗೆ

Related Articles

Back to top button