Latest

ರೇಣುಕಾಚಾರ್ಯರೂ ಆಕಾಂಕ್ಷಿಯಂತೆ, ಆದರೆ….

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ. ಆದರೆ ನಾನು ಯಾವುದೇ ಕಾರಣಕ್ಕೂ ಕೂಡ ಲಾಬಿ ಮಾಡಲ್ಲ. ಲಾಬಿ ಮಾಡಲು ನಾನು ದೆಹಲಿಗೆ ಬಂದಿಲ್ಲ ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ. ಹಾಗಂತ ಲಾಬಿ ಮಾಡುವುದಿಲ್ಲ. ಸಚಿವ ಸ್ಥಾನ ನೀಡಿವುದು, ಬಿಡುವುದು ಸಿಎಂ ಯಡಿಯೂರಪ್ಪನವರಿಗೆ ಬಿಟ್ಟದ್ದು. ನಾನು ನನ್ನ ಕ್ಷೇತ್ರದ ಕೆಲಸಕ್ಕಾಗಿ ದೆಹಲಿಗೆ ಬಂದಿದ್ದೆ ಎಂದರು.

Home add -Advt

ಇನ್ನು ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ. ಮುಂದಿನ ಮೂರು ವರ್ಷಗಳ ಕಾಲವೂ ಯಡಿಯೂರಪ್ಪನವರೇ ಸಿಎಂ ಆಗಿ ಮುಂದುವರೆಯುತ್ತಾರೆ ಎಂದು ಹೇಳಿದರು.

ಸಚಿವ ಸಂಪುಟ ವಿಸ್ತರಣೆ ಚರ್ಚೆಯಾಗುತ್ತಿದ್ದಂತೆಯೇ ಸಚಿವಾಕಾಂಕ್ಷಿಗಳು ದೆಹಲಿಗೆ ದೌಡಾಯಿಸಿದ್ದು, ಹೈಕಮಾಂಡ್ ಬಳಿ ಮಂತ್ರಿ ಸ್ಥಾನಕ್ಕಾಗಿ ಲಾಬಿ ನಡೆಸಿದ್ದಾರೆ ಎನ್ನಲಾಗಿದೆ. ಈಗಾಗಲೇ ಎಂಟಿಬಿ ನಾಗರಾಜ್, ಹೆಚ್ ವಿಶ್ವನಾಥ್ ಸೇರಿದಂತೆ ಹಲವರು ಹೈಕಮಾಂಡ್ ಭೇಟಿಗಾಗಿ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ ಎನ್ನಲಾಗುತ್ತಿದೆ.

Related Articles

Back to top button