*ಸಿಎಂ ಸಿದ್ದರಾಮಯ್ಯ ಭೇಟಿಯಾದ ಬಿಜೆಪಿ ನಾಯಕ ಎಂ.ಪಿ.ರೇಣುಕಾಚಾರ್ಯ; ಕುತೂಹಲ ಮೂಡಿಸಿದ ಬೆಳವಣಿಗೆ*
ಸಿಎಂ ಭೇಟಿ ಬೆನ್ನಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ್ ಜೊತೆಯೂ ಚರ್ಚೆ
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಆಪರೇಷನ್ ಹಸ್ತ ವಿಚಾರವಾಗಿ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆ ನಡೆದಿರುವಗಲೇ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದು, ಕುತೂಹಲಕ್ಕೆ ಕಾರಣವಾಗಿದೆ.
ಮುಖ್ಯಮಂತ್ರಿಗಳ ಸರ್ಕಾರಿ ನಿವಾಸದಲ್ಲಿ ಎಂ.ಪಿ.ರೇಣುಕಾಚಾರ್ಯ, ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದು, 20 ನಿಮಿಷಗಳ ಕಾಲ ಚರ್ಚೆ ನಡೆಸಿದ್ದಾರೆ. ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದು, ರಾಜ್ಯ ರಾಜಕೀಯಲ್ಲಿ ಸಂಚಲನ ಸೃಷ್ಟಿಸಿದೆ.
ಸಿಎಂ ಹಾಗೂ ಡಿಸಿಎಂ ಭೇಟಿ ಬಳಿಕ ಸುದ್ದಿಗರರೊಂದಿಗೆ ಮಾತನಾಡಿದ ರೇಣುಕಾಚಾರ್ಯ, ರಾಜಕೀಯವೇ ಬೇರೆ ಪರಸ್ಪರ ವಿಶ್ವಾಸವೇ ಬೇರೆ. ಬರ ವಿಚಾರವಾಗಿ ಚರ್ಚಿಸಲು ಸಿಎಂ ಹಾಗೂ ಡಿಸಿಎಂ ಭೇಟಿಯಾಗಿದ್ದೆ ಎಂದಿದ್ದಾರೆ.
ರಾಜಕಿಯೇತರ ಹಲವು ವಿಚಾರಗಳನ್ನು ಈ ವೇಳೆ ಚರ್ಚಿಸಲಾಯಿತು. ಅವರೂ ನನ್ನನ್ನು ಕಾಂಗ್ರೆಸ್ ಗೆ ಆಹ್ವಾನಿಸಿಲ್ಲ, ನಾನೂ ಎಲ್ಲಿಯೂ ಕಾಂಗ್ರೆಸ್ ಸೇರುತ್ತೇನೆ ಎಂದಿಲ್ಲ ಎಂದರು. ಅಲ್ಲದೇ ಇಂದು ವರಮಹಾಲಕ್ಷ್ಮೀ ಹಬ್ಬ ಹಾಗಾಗಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನೂ ಭೇಟಿಯಾಗಿದ್ದೇನೆ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ