ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಶಾಸಕ, ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೀನಾಯವಾಗಿ ಸೋಲನುಭವಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ.
ಹೊನ್ನಾಳಿ ಕ್ಷೇತ್ರದಲ್ಲಿ ಸೋಲನುಭವಿಸಿರುವ ಹಿನ್ನೆಲೆಯಲ್ಲಿ ರೇಣುಕಾಚಾರ್ಯ ತೀವ್ರ ಮುಖಭಂಗ ಅನುಭವಿಸಿದ್ದು, ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುವುದಾಗಿ ತಿಳಿಸಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ರಾಜಕೀಯ ನಿವೃತ್ತಿ ಹಿಂಪಡೆಯುವಂತೆ ಆಗ್ರಹಿಸಿ ಬೆಂಬಲಿಗರು ಹೊನ್ನಾಳಿಯಲ್ಲಿ ರೇಣುಕಾಚಾರ್ಯ ನಿವಾಸದ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಓರ್ವ ಕಾರ್ಯಕರ್ತ ವಿಷ ಸೇವಿಸಲು ಯತ್ನಿಸಿದ ಘಟನೆಯೂ ನಡೆದಿದೆ. ತಕ್ಷಣ ಇನ್ನುಳಿದ ಕಾರ್ಯಕರ್ತರು ಆತನನ್ನು ತಡೆದಿದ್ದಾರೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ