Latest

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಧೋನಿ ಸ್ಪರ್ಧಿಸಲಿ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಅಂತರಾಷ್ಟ್ರೀಯ ಕ್ರಿಕೆಟ್ ನಿಂದ ಟೀಂ ಇಂಡಿಯಾ ಮಾಜಿ ನಾಯಕ ಎಂ ಎಸ್ ಧೋನಿ ನಿವೃತ್ತಿ ಘೋಷಿಸಿದ ಬೆನ್ನಲ್ಲೇ 2024ರ ಲೋಕಸಭೆ ಚುನಾವಣೆಯಲ್ಲಿ ಮಹೇಂದ್ರ ಸಿಂಗ್‌ ಧೋನಿ ಸ್ಪರ್ಧಿಸಬೇಕೆಂದು ಬಿಜೆಪಿ ರಾಜ್ಯಸಭೆ ಸದಸ್ಯ ಸುಬ್ರಮಣಿಯನ್‌ ಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸುಬ್ರಮಣಿಯನ್‌ ಸ್ವಾಮಿ, ಎಂ.ಎಸ್. ಧೋನಿ ಕ್ರಿಕೆಟ್‌ನಿಂದ ನಿವೃತ್ತರಾಗುತ್ತಿದ್ದಾರೆ ಹೊರತು ಬೇರೆ ಯಾವುದರಿಂದಲೂ ಅಲ್ಲ. ಅವರ ಪ್ರತಿಭೆ ಸಮಸ್ಯೆಗಳ ವಿರುದ್ಧ ಹೋರಾಡಲು ನೆರವಾಗಬೇಕು. ಕ್ರಿಕೆಟ್‌ನಲ್ಲಿ ಅವರು ಪ್ರದರ್ಶಿಸಿದ ಸ್ಪೂರ್ತಿದಾಯಕ ನಾಯಕತ್ವ ಸಾರ್ವಜನಿಕ ಜೀವನಕ್ಕೆ ಅಗತ್ಯವಿದೆ. ಅವರು 2024ರ ಲೋಕಸಭೆ ಚುನಾವಣೆಗೆ ಸ್ಪರ್ಧಿಸಬೇಕು ಎಂದು ಹೇಳಿದ್ದಾರೆ.

2019ರ ವಿಶ್ವಕಪ್‌ ಕ್ರಿಕೆಟ್‌ ಬಳಿಕ ಯಾವುದೇ ಪಂದ್ಯವಾಡದ ಧೋನಿ ನಿವೃತ್ತಿ ಹೇಳಲಿದ್ದಾರೆ ಎಂಬ ಸುದ್ದಿ ಹಲವು ತಿಂಗಳಿನಿಂದ ಹರಿದಾಡುತ್ತಿತ್ತು. ಆದರೆ ಎಲ್ಲಿಯೂ ಅಧಿಕೃತವಾಗಿ ಧೋನಿ ತಿಳಿಸಿರಲಿಲ್ಲ. ಆದರೆ ಶನಿವಾರ ಎಲ್ಲ ಮಾದರಿಯ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಹೇಳುತ್ತಿರುವುದಾಗಿ ಘೋಷಿಸಿದ್ದರು.

Home add -Advt

Related Articles

Back to top button