Belagavi NewsBelgaum NewsLatest

*ಮಾಳು ನಿಪನಾಳ್ ವಿರುದ್ಧ ಹಲ್ಲೆ ಆರೋಪ ಎಸ್ಪಿ ಹೇಳಿದ್ದೇನು..?*

ಪ್ರಗತಿವಾಹಿನಿ ಸುದ್ದಿ: ಯಾರೂ ಕಾನೂನಿಗಿಂತ ಮೇಲಿನವರಲ್ಲ. ಯಾರೇ ಆಗಲಿ ಕಾನೂನು ತಮ್ಮ ಕೈಗೆ ತಗೆದುಕೊಂಡರೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂಬ ಎಚ್ಚರಿಕೆ ನೀಡುತ್ತೇವೆ ಎಂದು ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೆದ್ ಮಾಳು ನಿಪನಾಳ ಹಲ್ಲೆ ಮಾಡಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಈ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಜಾನಪದ ಕಲಾವಿದ ಮಾಳು ನಿಪನಾಳ್ ಎಂಬಾತ ಯಾವುದೋ ವಿಚಾರವಾಗಿ ಕೆಲವರ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಸ್ಥಳೀಯ ಪೊಲೀಸ್‌ ಠಾಣೆಯಲ್ಲಿ ವಿಚಾರಿಸಿದಾಗ ಈತ ಹಲ್ಲೆ ಮಾಡಿದ್ದು ಮೇಲ್ನೋಟಕ್ಕೆ ನಿಜವಾಗಿದೆ. 

ಈ ಪ್ರಕರಣದಲ್ಲಿ ನೊಂದ ಶೇಕಪ್ಪ ಹಕ್ಯಾಗೋಳ ಹಾಗೂ ಆತನ ಸಂಬಂಧಿಕರು ಚಿಕ್ಕೋಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗಾಗಲೇ ನೊಂದವರಿಗೆ ನಮ್ಮ ಪೊಲೀಸರು ಪೋನ್‌ ಮುಖಾಂತರ ಪ್ರಕರಣ ದಾಖಲಿಸುವಂತೆ ಹೇಳಿದ್ದಾರೆ. ಅವರು ಸಧ್ಯ ನಾವು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಆಮೇಲೆ ಪ್ರಕರಣ ದಾಖಲಿಸುವುದಾಗಿ ಹೇಳಿದ್ದಾರೆ ಎಂದು ಬೆಳಗಾವಿ ಎಸ್ಪಿ ಭೀಮಾಶಂಕರ ಗುಳೆದ್ ಅವರು ತಿಳಿಸಿದ್ದಾರೆ. 

Home add -Advt

Related Articles

Back to top button