Belagavi NewsBelgaum NewsKarnataka News

*ನಾ ಡ್ರೈವರಾ… ಖ್ಯಾತಿಯ ಗಾಯಕನಿಂದ ಹಲ್ಲೆ? ಮೂವರು ಆಸ್ಪತ್ರೆಗೆ ದಾಖಲು*

ಪ್ರಗತಿವಾಹಿನಿ ಸುದ್ದಿ: ಖ್ಯಾತ ಯೂಟೂಬರ್, ನಾ ಡ್ರೈವರಾ…ಖ್ಯಾತಿಯ ಗಾಯಕ ಮಾಳು ನಿಪನಾಳ್ ವಿರುದ್ಧ ಹಲ್ಲೆ ಆರೋಪ ಕೇಳಿಬಂದಿದೆ. ಮಹಿಳೆಯರು ಸೇರಿ ಮೂವರ ಮೇಲೆ ಮಾಳು ನಿಪನಾಳ್ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಿಪನಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶೇಖರ್, ಅಶ್ವಿನಿ ಹಾಗೂ ರೂಪಾ ಹಲ್ಲೆಗೊಳಗಾದವರು.

ಶೇಖರ್, ಅಶ್ವಿನಿ ಹಾಗೂ ರೂಪಾ ಮೂವರು ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಹೋಗುತ್ತಿದ್ದ ಮಾಳು ನಿಪನಾಳ್ ಬೈಕ್ ಗೆ ಕಾರು ಟಚ್ ಆಗಿದೆ. ಈ ವೇಳೆ ಶೇಖರ್ ಹಾಗೂ ಆತನ ಸಹೋದರಿ ‘ಸ್ವಲ್ಪ ನೋಡಿಕೊಂಡು ಕಾರು ಚಲಾಯಿಸಿ’ ಎಂದಿದ್ದಾರಂತೆ. ಅಷ್ಟಕ್ಕೇ ಮಾಳು ನಿಪನಾಳ್ ತನ್ನ ಕಾರು ನಿಲ್ಲಿಸಿ ಬೈಕ್ ಅಡ್ಡಗಟ್ಟಿ ಮೂವರನ್ನೂ ಅವಾಚ್ಯವಾಗಿ ನಿಂದಿಸಿದ್ದಲ್ಲದೇ ಹಲ್ಲೆ ನಡೆಸಿದ್ದಾಗಿ ಗಾಯಾಳುಗಳು ಆರೋಪಿಸಿದ್ದಾರೆ. ಅಲ್ಲದೇ ಮಹಿಳೆಯರೂ ಎಂಬುದನ್ನೂ ನೋಡದೇ ಕಲ್ಲಿನಿಂದ ಹೊಡೆದು ಹಲ್ಲೆ ಮಾಡಿದ್ದಾನೆ. ತಲೆ, ಕೈಗಳಿಗೆ ಗಂಭೀರ ಗಾಯಗಳಾಗಿದ್ದು, ಮೂವರೂ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸುದ್ದಿ ಪ್ರಸಾರವಾಗುತ್ತಿದ್ದಂತೆ ಮಾಳು ನಿಪನಾಳ್ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಪ್ರಕರಣದ ಬಗ್ಗೆ ಈವರೆಗೆ ಯಾವುದೇ ದೂರು ದಾಖಲಾಗಿಲ್ಲ. ಆದರೆ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Home add -Advt

ಈ ಕುರಿತು ಹೇಳಿಕೆ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾ ಶಂಕರ ಗುಳೇದ, ಮಾಳು ನಿಪ್ನಾಳ ಹಲ್ಲೆ ಮಾಡಿರುವುದು ಮೇಲ್ನೋಟಕ್ಕೆ ನಿಜವೆಂದು ತಿಳಿದು ಬಂದಿದೆ. ಹಲ್ಲೆಗೊಳಗಾದವರನ್ನು ಸಂಪರ್ಕಿಸಲಾಗಿದ್ದು ಅವರು ಆಸ್ಪತ್ರೆಯಿಂದ ಬಿಡುಗಡೆಯಾದ ನಂತರ ದೂರು ನೀಡುವುದಾಗಿ ತಿಳಿಸಿದ್ದಾರೆ. ದೂರು ಸ್ವೀಕರಿಸಿದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಯಾರೂ ಕೂಡ ಕಾನೂನಿಗಿಂತ ದೊಡ್ಡವರಲ್ಲ ಎಂದು ತಿಳಿಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button