
ಗಾಯಾಳುಗಳು ಆಸ್ಪತ್ರೆಗೆ ದಾಖಲು
ಪ್ರಗತಿವಾಹಿನಿ ಸುದ್ದಿ: ಹುಚ್ಚು ನಾಯಿ 20ಕ್ಕೂ ಹೆಚ್ಚು ಜನರ ಮೇಲೆ ದಾಳಿ ನಡೆಸಿ ಕಚ್ಚಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೀಶ್ವರ ಪಟ್ಟಣದಲ್ಲಿ ನಡೆದಿದೆ.
ಹುಚ್ಚು ನಾಯಿ ದಾಳಿಯಿಂದ ಲಕ್ಷ್ಮೇಶ್ವರ ಪಟ್ಟಣದ ಜನತೆ ಕಂಗಾಲಾಗಿದ್ದು, ನಾಯಿ ಹಿಡಿಯುವಂತೆ ಪುರಸಭೆ ಅಧಿಕಾರಿಗಳಿಗೆ ಆಗ್ರಹಿಸಿದ್ದಾರೆ. ಆದಾಗ್ಯೂ ಅಧಿಕರಿಗಳು ಈ ಬಗ್ಗೆ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ.
ಈಗ ಹುಚ್ಚು ನಾಯಿಯೊಂದು 20ಕ್ಕೂ ಹೆಚ್ಚು ಜನರ ಮೇಲೆ ದಾಳಿ ಮಾಡಿ ಕಚ್ಹ್ಚಿದೆ. ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್ ಹಾಗೂ ಗದಗ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪುರಸಭೆ ಅಧಿಕಾರಿಗಳ ಬೇಜವಾಬ್ದಾರಿಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ