Uncategorized

ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ

Home add -Advt

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಲೋಕಾಯುಕ್ತ ದಾಳಿ ಬೆನ್ನಲ್ಲೇ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ನಿಗಮ-KSDL ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಸಿಎಂ ಬಸವರಾಜ್ ಬೊಮ್ಮಾಯಿ ಸೂಚನೆ ಮೇರೆಗೆ ಮಾಡಾಳ್ ವಿರೂಪಾಕ್ಷಪ್ಪ ರಾಜಿನಾಮೆ ನೀಡಿದ್ದು, ಸಿಎಂ ಕಚೇರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ.

ಪುತ್ರ ಪ್ರಶಾಂತ್ ನಿವಾಸದ ಮೇಲೆ ಲೋಕಾಯುಕ್ತ ದಾಳಿಗೂ ನನಗೂ ಯಾವುದೇ ಸಂಬಂಧವಿಲ್ಲ. ನನ್ನ ಹಾಗೂ ಕುಟುಂಬದ ವಿರುದ್ಧ ಷಡ್ಯಂತ್ರ ನಡೆಸಲಾಗುತ್ತಿದೆ. ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುತ್ತಿದ್ದೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇನ್ನು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಿವಾಸದ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸುವ ಸಾದ್ಯತೆ ದಟ್ಟವಾಗಿದೆ.

Related Articles

Back to top button