Kannada NewsKarnataka NewsLatest
*ಮದ್ದೂರಿನಲ್ಲಿ ಸಾಮೂಹಿಕ ಗಣೇಶ ಮೂರ್ತಿಗಳ ಮೆರವಣಿಗೆ: ರಾರಾಜಿಸಿದ ಕೇಸರಿ ಬಾವುಟ: ಬಿಜೆಪಿ ನಾಯಕರು ಭಾಗಿ*

ಪ್ರಗತಿವಾಹಿನಿ ಸುದ್ದಿ: ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಎರಡು ದಿನಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪರಿಸ್ಥಿತಿ ಉದ್ವಿಗ್ನಗೊಂಡಿದ್ದ ಬೆನ್ನಲ್ಲೇ ಇಂದು ಮದ್ದೂರಿನಲ್ಲಿ ಸಾಮೂಹಿಕ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ ಆರಂಭವಾಗಿದೆ.
ಮದ್ದೂರಿನ ಐಬಿ ಸರ್ಕಲ್ ನಿಂದ ಆರಂಭವಾದ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆಯಲ್ಲಿ 28 ಗಣೇಶ ಮೂರ್ತಿಗಳು ಸಾಗಿದ್ದು, ಅದ್ಧೂರಿ ಮೆರವಣಿಗೆಯಲ್ಲಿ ಕಲಾತಂಡಗಳು ಹೆಜ್ಜೆ ಹಾಕಿವೆ. ಭಾರಿ ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಪಾಲ್ಗೊಂಡಿದ್ದು, ಕೇಸರಿ ಬಾವುಟ ಹಿಡಿದು ಜನರು ಕುಣಿದು ಕುಪ್ಪಳಿಸಿದ್ದಾರೆ.
ಗನೇಶ ಮೂರ್ತಿಗಳ ಮೆರವಣಿಯಲ್ಲಿ ರಾಜ್ಯ ಬಿಜೆಪಿ ನಾಯಕರಾದ ಬಿ.ವೈ.ವಿಜಯೇಂದ್ರ, ಆರ್.ಅಶೋಕ್, ಸಿ.ಟಿ.ರವಿ, ಸಂಸದ ಯದುವೀರ್ ಒಡೆಯರ್, ಅಶ್ವತ್ಥನಾರಾಯಣ ಸೇರಿದಂತೆ ಹಲವು ನಾಯಕರು ಹಾಗೂ ಜೆಡಿಎಸ್ ಕಾರ್ಯಕರ್ತರು ಪಾಲ್ಗೊಂಡಿದ್ದಾರೆ. ಮೂರು ಕಿ.ಮೀವರೆಗೆ ಮೆರವಣಿಗೆ ಸಾಗಲಿದ್ದು ಬಳಿಕ ಶಿಂಷಾ ನದಿಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆ ನಡೆಯಲಿದೆ.