
ಪ್ರಗತಿವಾಹಿನಿ ಸುದ್ದಿ: ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಕಲ್ಲುತೂರಾಟ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಈ ಘಟನೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ.
ಮದ್ದೂರಿನಲ್ಲಿ ಕಲ್ಲು ತೂರಾಟ ಘಟನೆ ಖಂಡಿಸಿ ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಪೊಲೀಸರು ಲಾಠಿ ಚಾರ್ಜ್ ಮಾಡಿ ಪ್ರತಿಭಟನಾಕಾರರನ್ನು ಚದುರಿಸಿದ್ದಾರೆ. ಪೊಲೀಸರ ಲಾಠಿ ಏಟಿಗೆ ಮೂವರು ಮಹಿಳೆಯರು ಸೇರಿ ಹಲವರು ಗಾಯಗೊಂಡಿದ್ದಾರೆ.
ಘಟನೆ ಬೆನ್ನಲ್ಲೇ ಪ್ರತಿಭಟನೆ ಇನ್ನಷ್ಟು ತೀವ್ರಗೊಂಡಿದೆ. ಪೊಲೀಸರು ನಡೆಸಿದ ಲಾಠಿಚಾರ್ಜ್ ಖಂಡಿಸಿ ಬಿಜೆಪಿ ಕಾರ್ಯಕರ್ತರು ಮತ್ತಷ್ಟು ಪ್ರತಿಭಟನೆ ನಡೆಸುತ್ತಿದ್ದು, ಮಾಜಿ ಸಂಸದ ಪ್ರತಾಪ್ ಸಿಂಹ ಕೂಡ ಭಾಗಿಯಾಗಿದ್ದಾರೆ. ಲಾಠಿಚಾರ್ಜ್ ಮಾಡಿರುವ ಪೊಲೀಸರನ್ನು ಅಮಾನತುಗೊಳಿಸುವಂತೆ ಆಗ್ರಹಿಸಿದ್ದಾರೆ.