Film & EntertainmentKannada NewsKarnataka NewsLatest

*ಮಡೆನೂರು ಮನು ವಿರುದ್ಧದ ಕೇಸ್ ಹಿಂಪಡೆದ ಸಂತ್ರಸ್ತೆ*

ಪ್ರಗತಿವಾಹಿನಿ ಸುದ್ದಿ: ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ಮಡೆನೂರು ಮನು ವಿರುದ್ಧ ಸಹಕಲಾವಿದೆ ಮೇಲೆ ಅತ್ಯಾಚಾರ ಹಲ್ಲೆ ನಡೆಸಿದ್ದ ಆರೋಪ ಕೇಳಿಬಂದಿತ್ತು. ಈ ಪ್ರಕರಣದಲ್ಲಿ ಮಡೆನೂರು ಮನು ಐಲುಪಾಲಾಗಿ ಜಾಮೀನು ಮೇಲೆ ಬಿಡುಗಡೆಯಾಗಿದ್ದರು. ಇದೀಗ ಈ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ.

ಮಡೆನೂರು ಮನು ವಿರುದ್ಧ ಅತ್ಯಾಚಾರ ಆರೋಪದಲ್ಲಿ ಕೇಸ್ ದಾಖಲಿಸಿದ್ದ ಸಂತ್ರಸ್ತೆ ರಾಜಿ ಮಾಡಿಕೊಂಡಿದ್ದು, ಕೇಸ್ ಹಿಂಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಸಂತ್ರಸ್ತೆ ಮಡೆನೂರು ಮನು ಜೊತೆ ರಾಜಿ ಮಾಡಿಕೊಂಡಿದ್ದಾರೆ. ಒಪ್ಪಂದದಿಂದ ಕೇಸ್ ಕ್ಲೋಸ್ ಆಗಿದೆ ಎಂದು ವಕೀಲರು ತಿಳಿಸಿದ್ದಾರೆ. ಸಂತ್ರಸ್ತೆ ಕೇಸ್ ಹಿಂಪಡೆದಿದ್ದರಿಂದ ಮಡೆನೂರು ಮನುಗೆ ರಿಲೀಫ್ ಸಿಕ್ಕಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button