Kannada NewsKarnataka NewsLatestPolitics

*ಮಧು ಬಂಗಾರಪ್ಪಗೆ ಅಹಂ ಜಾಸ್ತಿಯಾಗಿದೆ; ಸ್ವಪಕ್ಷದ ಸಚಿವರ ವಿರುದ್ಧವೇ ಕಿಡಿ ಕಾರಿದ ಕಾಂಗ್ರೆಸ್ ಶಾಸಕ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಚಿವ ಮಧು ಬಂಗಾರಪ್ಪ ಅವರಿಗೆ ಅಧಿಕಾರದ ಪಿತ್ತ ನೆತ್ತಿಗೇರಿದೆ. ಅವರಿಗೆ ಅಹಂ ಜಾಸ್ತಿಯಾಗಿದೆ ಎಂದು ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಸಚಿವರ ವಿರುದ್ಧವೇ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ, ಎಲ್ಲ ಉಸ್ತುವಾರಿ ಸಚಿವರೂ ಸರಿಯಾಗಿದ್ದಾರೆ. ಆದರೆ ನಮ್ಮ ಉಸ್ತುವಾರಿ ಸಚಿವರಿಗೆ ಅಹಂ ಜಾಸ್ತಿಯಾಗಿದೆ. ಎಲ್ಲಾ ವಿಚಾರದಲ್ಲಿ ಮೂಗು ತೂರಿಸುತ್ತಿದ್ದಾರೆ. ನಾವು ಶಾಸಕರಲ್ವಾ? ನಮಗೂ ಜವಾಬ್ದಾರಿ ಇಲ್ವಾ? ಎಂದು ಪ್ರಶ್ನಿಸಿದರು.

ನಾವು ಬಿ.ಎಸ್.ಯಡಿಯೂರಪ್ಪ ಮಕ್ಕಳನ್ನು ಸೋಲಿಸಬೇಕು ಅಂತ ಇದ್ದೇವೆ. ಸಂಸದ ಬಿ.ವೈ.ರಾಘವೇಂದ್ರ ಅವರನ್ನು ಸೋಲಿಸಬೇಕು ಅಂತ ಇದ್ದೇವೆ. ಆದರೆ ನಮ್ಮ ಸಚಿವರು ನಮ್ಮಲ್ಲೇ ಒಡಕು ಮೂಡಿಸುತ್ತಿದ್ದಾರೆ. ಮಧು ಬಂಗಾರಪ್ಪ ಅವರು ಮಾಜಿ ಸಿಎಂ ಮಗ ಅವರ ತಂದೆ ಗರಡಿಯಲ್ಲಿ ಪಳಗಿದವರು ನಾವು. ಎಲ್ಲರನ್ನೂ ಒಗ್ಗೂಡಿಸಿಕೊಂಡು ಕರೆದುಕೊಂಡು ಹೋಗಬೇಕು ಅವರೇ ಪಕ್ಷ ಒಡೆಯುವುದಲ್ಲ ಎಂದು ಹೇಳಿದರು.

ಇನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಯಾರು ಎನ್ನುವುದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ನಾನು ಒಬ್ಬ ಪ್ರಬಲ ಆಕಾಂಕ್ಷಿ ಎಂದರು.

Home add -Advt


Related Articles

Back to top button