Kannada NewsKarnataka NewsLatestPolitics

*ಸಚಿವ ಮಧು ಬಂಗಾರಪ್ಪ ಕಾರು ಅಪಘಾತ*

ಪ್ರಗತಿವಾಹಿನಿ ಸುದ್ದಿ; ತುಮಕೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ತುಮಕೂರಿನ ನಂದಿಹಳ್ಳಿ ಬಳಿ ನಡೆದಿದೆ.

ಸಚಿವ ಮಧು ಬಂಗಾರಪ್ಪ ಶಿವಮೊಗ್ಗದಿಂದ ಬೆಂಗಳೂರಿಗೆ ಆಗಮಿಸುತಿದ್ದರು. ಈ ವೇಳೆ ತಡರಾತ್ರಿ ಈ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಸಚಿವರು ಪಾರಾಗಿದ್ದಾರೆ.

ಸಚಿವರ ಕಾರಿಗೆ ಲಾರಿ ಡಿಕ್ಕಿ ಹೊಡೆದಿದೆ. ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಯಾರಿಗೂ ಯಾವುದೇ ತೊಂದರೆಯಾಗಿಲ್ಲ. ಅಪಘಾತದ ಬಳಿಕ ಸಚಿವರು ಬೇರೊಂದು ಕಾರಿನಲ್ಲಿ ಪ್ರಯಾಣಿಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button