*ಸಚಿವ ಮಧು ಬಂಗಾರಪ್ಪ ಕಾರು ಅಪಘಾತ*

ಪ್ರಗತಿವಾಹಿನಿ ಸುದ್ದಿ; ತುಮಕೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ತುಮಕೂರಿನ ನಂದಿಹಳ್ಳಿ ಬಳಿ ನಡೆದಿದೆ. ಸಚಿವ ಮಧು ಬಂಗಾರಪ್ಪ ಶಿವಮೊಗ್ಗದಿಂದ ಬೆಂಗಳೂರಿಗೆ ಆಗಮಿಸುತಿದ್ದರು. ಈ ವೇಳೆ ತಡರಾತ್ರಿ ಈ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಸಚಿವರು ಪಾರಾಗಿದ್ದಾರೆ. ಸಚಿವರ ಕಾರಿಗೆ ಲಾರಿ ಡಿಕ್ಕಿ ಹೊಡೆದಿದೆ. ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಯಾರಿಗೂ ಯಾವುದೇ ತೊಂದರೆಯಾಗಿಲ್ಲ. ಅಪಘಾತದ ಬಳಿಕ ಸಚಿವರು ಬೇರೊಂದು ಕಾರಿನಲ್ಲಿ ಪ್ರಯಾಣಿಸಿದ್ದಾರೆ. *ಬೆಳಗಾವಿ ಜನತೆಯಲ್ಲಿ ಮನವಿ*